ರಚನೆ: ಕುವೆಂಪು
ಸಂಗೀತ: ಸಿ.ಅಶ್ವತ್ಥ್
ಜಯ ಭಾರತ ಜನನಿಯ ತನುಜಾತೆ
ಜಯ ಹೇ ಕರ್ನಾಟಕ ಮಾತೆ
ಜಯ ಸುಂದರ ನದಿವನಗಳ ನಾಡೇ
ಜಯ ಹೇ ರಸ ಋಷಿಗಳ ಬೀಡೆ.
ಭೂದೇವಿಯ ಮಕುಟದ ನವಮಣಿಯೆ
ಗಂಧದ ಚಂದದ ಹೊನ್ನಿನ ಗಣಿಯೆ
ರಾಘವ ಮಧುಸೂಧನರವತರಿಸಿದ
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!
ಜನನಿಯ ಜೋಗುಳ ವೇದದ ಘೋಶ,
ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ,
ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ,
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!
ಶಂಕರ ರಾಮಾನುಜ ವಿದ್ಯಾರಣ್ಯ,
ಬಸವೇಶರರಿಹ ದಿವ್ಯಾರಣ್ಯ,
ರನ್ನ ಶಡಕ್ಷರಿ ಪೊನ್ನ,
ಪಂಪ ಲಕುಮಿಪತಿ ಜನ್ನ,
ಕಬ್ಬಿಗರುದಿಸಿದ ಮಂಗಳ ಧಾಮ,
ಕವಿ ಕೋಗಿಲೆಗಳ ಪುಣ್ಯಾರಾಮ,
ನಾನಕ ರಾಮಾನಂದ ಕಬೀರರ
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!
ತೈಲಪ ಹೊಯ್ಸಳರಾಳಿದ ನಾಡೇ
ಕಂಕಣ ಜಕಣರ ನಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗ
ಕಾವೇರಿಯ ವರ ರಂಗ
ಚೈತನ್ಯ ಪರಮಹಂಸ ವಿವೇಕರ
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!
ಸರ್ವ ಜನಾಂಗದ ಶಾಂತಿಯ ತೋಟ
ರಸಿಕರ ಕಂಗಳ ಸೆಳೆಯುವ ನೋಟ
ಹಿನ್ದು ಕ್ರೈಸ್ತ ಮುಸಲ್ಮಾನ
ಪರತಿಕ ಜೈನರುಗ್ಯಾನ
ಜನಕನ ಹೋಲುವ ದೊರೆಗಳ ಧಾಮ
ಗಾಯಕ ವೈನಿಕರಾರಾಮ
ಕನ್ನದ ನುಡಿ ಕುಣಿದಾಡುವ ಗೇಹ
ಕನ್ನದ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ !
ಜಯ ಹೇ ಕರ್ನಾಟಕ ಮಾತೆ !!
No comments:
Post a Comment