ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೆ ನಮೋಸ್ತುತೆ
ಪ್ರೇಮದಿಂದಲಿ ಸಲಹು ಮಾತೆ ನೀಡು ಸನ್ಮತಿ ಸೌಖ್ಯದಾತೆ
ಅಂಧಕಾರವ ಓಡಿಸು ಜ್ಞಾನ ಜ್ಯೋತಿಯ ಬೆಳಗಿಸು
ಹೃದಯ ಮಂದಿರದಲ್ಲಿ ನೆಲೆಸು ಚಿಂತೆಯಾ ಅಳಿಸು
ಶಾಂತಿಯಾ ಉಳಿಸು
ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೆ ನಮೋಸ್ತುತೆ
ನಿನ್ನ ಮಡಿಲಿನ ಮಕ್ಕಳಮ್ಮ ನಿನ್ನ ನಂಬಿದ ಕಂದರಮ್ಮ
ನಿನ್ನ ಕರುಣೆಯ ಬೆಳಕಲೆಮ್ಮ ಬಾಳನೂ ಬೆಳಗಮ್ಮ
ನಮ್ಮ ಕೋರಿಕೆ ಆಲಿಸಮ್ಮ
ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೆ ನಮೋಸ್ತುತೆ
ಒಳ್ಳೆ ಮಾತುಗಳಾಡಿಸು ಒಳ್ಳೆ ಕೆಲಸವ ಮಾಡಿಸು
ಒಳ್ಳೆ ದಾರಿಯಲೆಮ್ಮ ನಡೆಸು ವಿದ್ಯೆಯಾ ಕಲಿಸು
ಆಸೆ ಪೂರೈಸೂ
ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೆ ನಮೋಸ್ತುತೆ
ಪ್ರೇಮದಿಂದಲಿ ಸಲಹು ಮಾತೆ ನೀಡು ಸನ್ಮತಿ ಸೌಖ್ಯದಾತೆ
3 comments:
hi thanks a lot... very good collection. please put many more songs..
jagadish patil
ಅತ್ಯುತ್ತಮ ಸಂಗ್ರಹ. ಧನ್ಯವಾದಗಳು.
ತುಂಬಾ ಧನ್ಯವಾದಗಳು ಸರ್.. ಹಾಗೆಯೇ ಬೊಂಬೆಯಾಟವಯ್ಯಾ ಡಾ ರಾಜ್ ಸಾಹಿತ್ಯ ಇದ್ರೆ ಕಳಿಸಿಕೊಡಿ ಪ್ಲೀಸ್
Post a Comment